ಬೆಂಗಳೂರು: ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಕೊರೊನಾ ಮೂವರನ್ನು ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 204ರಲ್ಲಿ ಅಂತರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ 157 ಪ್ರಕರಣಗಳಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಯಾದಗಿರಿ 66, ಉಡುಪಿ 22, ಬೆಂಗಳೂರು 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, ಮೈಸೂರು 5, ರಾಮನಗರ 5, ವಿಜಯಪುರ 4, ಬಾಗಲಕೋಟೆ 3, ಉತ್ತರ ಕನ್ನಡ 3, ದಕ್ಷಿಣ ಕನ್ನಡ 2, ಹಾಸನ 2, ಧಾರವಾಡ 2, ಬೆಂಗಳೂರು ಗ್ರಾಮಾಂತರ 1, ಚಿಕ್ಕಮಗಳೂರು 1, ಕೊಪ್ಪಳದಲ್ಲಿ 1 ಪ್ರಕರಣಗಳು ಬೆಳಕಿಗೆ ಬಂದಿವೆ. ಯಾದಗಿರಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡಿ ಬಂದಿವೆ.
6245 ಪ್ರಕರಣಗಳಲ್ಲಿ 2976 ಮಂದಿ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 3195 ಸಕ್ರಿಯ ಪ್ರಕರಣಗಳಿವೆ.
ಮೂರು ಸಾವು:
1. ರೋಗಿ 6020: ಬೆಂಗಳೂರಿನ 35 ವರ್ಷದ ವ್ಯಕ್ತಿ. ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವ್ಯಕ್ತಿ ದೀರ್ಘಕಾಲದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 7ರಂದು ದಾಖಲಾಗಿದ್ದ ರೋಗಿ ಚಿಕಿತ್ಸೆ ಫಲಕಾರಿಯಾಗದೇ ಜೂನ್ 10ರಂದು ಮರಣ ಹೊಂದಿದ್ದಾರೆ.
2. ರೋಗಿ 6029: ಬೆಂಗಳೂರಿನ 60 ವರ್ಷದ ಪುರುಷನಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 9ರಂದು ದಾಖಲಾಗಿದ್ದ ರೋಗಿ ಚಿಕಿತ್ಸೆ ಫಲಕಾರಿಯಾಗದೇ ಜೂನ್ 11ರಂದು ನಿಧನರಾಗಿದ್ದಾರೆ.
3. ರೋಗಿ 6207: ರಾಯಚೂರಿನ 28 ವರ್ಷ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆ ಬೀದರ್ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮೇ 30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 8ರಂದು ನಿಧನರಾಗಿದ್ದಾರೆ.