Breaking News

ಬಾಲಕಿಯ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ

Spread the love

ಬೆಳಗಾವಿ -: ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ,  ನಮ್ಮ ತಾಯಿಗೆ ಮೂತ್ರಕೋಶದ (ಕಸಿ)ಮರುಜೋಡಣೆ  ಶಸ್ತ್ರಚಿಕಿತ್ಸೆಯಾಗಿದೆ. ಅವರು ನಿತ್ಯವೂ ಸೇವಿಸಬೇಕಾದ ಮಾತ್ರೆಗಳು ಮುಗಿದು ಹೋಗಿರುವುದರಿಂದ ದಯವಿಟ್ಟು  ಮಾತ್ರೆಗಳನ್ನು ಪೂರೈಸಿರಿ ಎಂದು ಮುಖ್ಯಮಂತ್ರಿ  ಸಹಾಯವಾಣಿಗೆ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ.
ಶುಕ್ರವಾರ(ಏ.೧೦) ಸಂಜೆ 6 ಗಂಟೆ ಸುಮಾರಿಗೆ ಸಿಎಂ ಕಚೇರಿಯ ಹಿರಿಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ, ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದಲ್ಲಿರುವ  ಸೇಕವ್ವ ಅರಭಾಂವಿ(45) ಅವಳಿಗೆ ಮಾತ್ರೆಗಳನ್ನು ಪೂರೈಸುವಂತೆ ತಿಳಿಸಿದ್ದರು.
ಕೂಡಲೇ ಸಿಎಂ ಕಚೇರಿಯ ಕರೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಬೆಳಗಾವಿಯ ತಹಶೀಲ್ದಾರರ ಮೂಲಕ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಮಾತ್ರೆಗಳನ್ನು ಅವರ ಮನೆ ಬಾಗಿಲಿಗೆ ಕಳುಹಿಸಿಕೊಡುವ ಮೂಲಕ ಬಾಲಕಿಯ ಮನವಿಗೆ ತಕ್ಷಣ ಸ್ಪಂದಿಸಿದ್ದಾರೆ.

Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ