ಬೆಳಗಾವಿ:ಬಿಜೆಪಿಯಲ್ಲಿ ತೀವ್ರತರಹದ ಭಿನ್ನಮತದ ಬೆಂಕಿ ಕಾಣಿಸಿಕೊಂಡಿದ್ದು ರಾಜ್ಯ ಬಿಜೆಪಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ’ ಎಂದು ವಿಧಾನಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಹೇಳಿದ್ದಾರೆ.
ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಸಚಿವ ಸಂಪುಟದಲ್ಲಿ ಅರ್ಧದಷ್ಟು ಮಂದಿ ನಮ್ಮ ಪಕ್ಷದಿಂದ ಹೋದವರೇ ಇದ್ದಾರೆ. ಅವರೆಲ್ಲರೂ ಅಸಮಾಧಾನಗೊಂಡಿದ್ದಾರೆ. ಒಬ್ಬರ ಮುಖದಲ್ಲೂ ಕಳೆ ಇಲ್ಲ. ಇದು, ಸರ್ಕಾರಕ್ಕೆ ಮುಳುವಾಗಲಿದೆ’ ಎಂದಿದ್ದು, ಶೀಘ್ರದಲ್ಲೇ ಸರಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.
ಸರ್ಕಾರ ಬೀಳಲೆಂದು ನಾವು ಯಾವುದೇ ತಂತ್ರಗಳನ್ನು ಮಾಡಬೇಕಾದ ಅಗತ್ಯವೇ ಇಲ್ಲ. ತಾನಾಗಿಯೇ ಪತನಗೊಳ್ಳಲಿದೆ. ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಯಾರೂ ಸರ್ಕಾರ ಕೆಡವಲು ಕಾರ್ಯಾಚರಣೆ ನಡೆಸಬೇಕಾಗಿಲ್ಲ’ ಎಂದು ಹೇಳಿದ್ದಾರೆ.