Breaking News

ಮುಜರಾಯಿ ದೇವಾಲಯಗಳನ್ನೂ ತೆರೆಯಲು ಮುಂದಾದ ಸರ್ಕಾರ; ಸಚಿವ ಶ್ರೀನಿವಾಸ ಪೂಜಾರಿ ಮಾಹಿತಿ

Spread the love

ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಾಸ್ಥಾನಗಳನ್ನು ತೆರೆಯಲಾಗುವುದು. ಆದರೆ, ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರಥಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೆಂಗಳೂರು (ಮೇ 05); ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳು ತೆರೆಯಲಿವೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡೇ ದೇವರ ದರ್ಶನ ಪಡೆಯಬೇಕು ಎಂದು ಮುಜಾರಾಯಿ ಇಲಾಖೆ ಸಚಿವ  ಮಾಹಿತಿ ನೀಡಿದ್ದಾರೆ.   

ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್ ಇದ್ದಾಗ್ಯೂ ರಾಜ್ಯದಲ್ಲಿ ಕೆಲವು ವಲಯಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮುಕ್ತ ಓಡಾಟ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ನಿನ್ನೆಯಿಂದ ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ

.ಮುಜರಾಯಿ ದೇವಾಲಯಗಳನ್ನೂ ತೆರೆಯಲು ಮುಂದಾದ ಸರ್ಕಾರ; ನ್ಯೂಸ್‌18ಗೆ ಸಚಿವ ಶ್ರೀನಿವಾಸ ಪೂಜಾರಿ ಮಾಹಿತಿ

ಅದರಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಾಸ್ಥಾನಗಳನ್ನು ತೆರೆಯಲಾಗುವುದು. ಆದರೆ, ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರಥಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು. ಆರಂಭದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ಪ್ರಮುಖ ದೇವಸ್ಥಾನಗಳನ್ನು ತೆರೆಯಲಾಗುವುದು ನಂತರ ಇತರೆ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕಾಗವಾಡದ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಗಂಗಾಮಕ್ಕೆ ಚಾಲನೆ.

Spread the love ——————————– ಕಾಗವಾಡ ತಾಲೂಕಿನ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ 13ನೆ ಕಬ್ಬು ನುರಿಸುವ ಹಂಗಾಮಕ್ಕೆ ಸಕ್ಕರೆ ಕಾರ್ಖಾನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ