ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ.
ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,08,300 ಕಾರ್ಮಿಕರನ್ನು ಕೆಎಸ್ಆರ್ಟಿ ಬಸ್ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್ಗಳಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಕಳಿಸಿಕೊಡಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಯಾವುದೇ ಸ್ಥಳಗಳಿಂದ ಮತ್ಯಾವ ಪ್ರದೇಶಗಳಿಗೂ ಜನರನ್ನು ಕಳಿಸಲಾಗುವುದಿಲ್ಲ ಎನ್ನಲಾಗಿದೆ.
ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ.
ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡು ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ. ಹೊರ ರಾಜ್ಯದ ಕಾರ್ಮಿಕರಿಗೆ ಇನ್ನೂ ಸಿಕ್ಕಿಲ್ಲ ಮುಕ್ತಿ. ಒಂದೊಂದು ಜಿಲ್ಲೆಯಿಂದ ನೂರಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ತಮ್ಮ ತಮ್ಮ ರಾಜ್ಯಗಳಿಗೆ ಹೋಗಲು ಕಾರ್ಮಿಕರು ಕಾದು ಕುಳಿತಿದ್ದಾರೆ. ಈ ಹೊತ್ತಿಗಾಗಲೇ ರಾಜ್ಯದ ಉಚಿತ ಬಸ್ ವ್ಯವಸ್ಥೆ ಅವಧೀ ಮುಗಿದಿದೆ.