ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತೀ ಹೆಚ್ಚು ಕರೋನಾ ಕೇಸ್ ಪತ್ತೆಯಾಗಿದ್ದು, ಇಂದು ಪತ್ತೆಯಾದ ಬಹುತೇಕರು ಹೊರ ರಾಜ್ಯಗಳಿಂದ ಕರ್ನಾಟಕ್ಕೆ ಬಂದವರಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ 15,ದಾವಣಗೆರೆಯಲ್ಲಿ 12, ಧಾರವಾಡ 9, ಬೀದರ್ 2, ಕೋಲಾರ 5, ಗದಗ 3, ಹಾಸನ 5, ಬೆಂಗಳೂರು 4, ಕಲಬುರಗಿ 1, ಯಾದಗಿರಿ , ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.
ಮೂರನೆ ಹಂತದ ಲಾಕ್ ಡೌನ್ ಅವಧಿ ಮೇ 17ರಂದು ಮುಗಿಯುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿದ್ದು, ಗ್ರೀನ್ ಝೋನ್ ಗಳಿಗೂ ಕಾಲಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ