Breaking News

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ

Spread the love

ಹೈದರಾಬಾದ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಯೆರ್ರಪಹಾದ್ ಗ್ರಾಮದಲ್ಲಿ ನಡೆದಿದೆ.

ಲಿಂಗಮಣಿ (40) ಮತ್ತು ಸಿರೀಶಾ (18) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಲಿಂಗಮಣಿ ಪತಿ ಲಕ್ಷ್ಮರೆಡ್ಡಿ ಮತ್ತು ಮಗ ರಣ್‍ದೀಪ್ ರೆಡ್ಡಿ ಇಬ್ಬರು ಮನೆಯಿಂದ ಹೊರಗೆ ಹೋದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಮೃತ ಲಿಂಗಮಣಿ ಕುಟುಂಬ ಹೊಸ ಮನೆ ನಿರ್ಮಾಣ ಮಾಡಿದ್ದು, ಅದಕ್ಕಾಗಿ ಕುಟುಂಬವು 7 ಲಕ್ಷ ಸಾಲವನ್ನು ಪಡೆದುಕೊಂಡಿದೆ. ಆದರೆ ಲಕ್ಷ್ಮರೆಡ್ಡಿ ಮತ್ತು ರಣ್‍ದೀಪ್ ರೆಡ್ಡಿ ಯಾವುದೇ ಕೆಲಸ ಮಾಡದೆ ಮನೆಯಲ್ಲಿಯೇ ಇರುತ್ತಿದ್ದರು. ಇದರಿಂದ ಕೋಪಗೊಂಡ ಲಿಂಗಮಣಿ ಕೆಲಸ ಮಾಡದಿದ್ದರೆ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಜಗಳ ಮಾಡಿದ್ದಾರೆ. ಜಗಳದ ನಂತರ ಪತಿ ಮತ್ತು ಮಗ ಜಮೀನಿಗೆ ಹೋಗಿದ್ದಾರೆ ಎಂದು ಸಬ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಹೇಳಿದ್ದಾರೆ.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಕುಟುಂಬ ಸದಸ್ಯರು ಕುಳಿತು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರೆ, ಈ ಅನಾಹುತ ನಡೆಯುತ್ತಿರಲಿಲ್ಲ ಎಂದು ಎಸ್‍ಐ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ

Spread the loveಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ