ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬೆಂಗಳೂರು ನಗರ ಸಕ್ಸಸ್ ಆಗಿದೆ. ಕೇಂದ್ರ ಸರ್ಕಾರ ಪ್ರಶಂಸೆ ಮಾಡಿದ್ದು ಖುಷಿ ತಂದಿದೆ. ಇದಕ್ಕೆ ನಮ್ಮ ವೈದ್ಯ ಸಿಬ್ಬಂದಿ, ಅಧಿಕಾರಿ ವರ್ಗ ಸೇರಿ ಎಲ್ಲ ಇಲಾಖೆಗಳ ಶ್ರಮವೂ ಕಾರಣ ಎಂದು ತಿಳಿಸಿದರು.
ಸದ್ಯ ಜಿಮ್‍ಗಳು ಆರಂಭವಾಗಲ್ಲ. ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಮುದಾಯಗಳಿಗೆ ಈಗಾಗಲೇ ಸಹಾಯಧನ ಘೋಷಣೆ ಮಾಡಿದ್ದೇವೆ. ನೇಕಾರರು, ಕ್ಷೌರಿಕ ವೃತ್ತಿ ಅವರಿಗೂ ಸಂಕಷ್ಟ ಇತ್ತು ಆ ಸಮುದಾಯಗಳನ್ನು ಗುರುತಿಸಿದ್ದೇವೆ. ನಮ್ಮ ರಾಜ್ಯದ ಹಣಕಾಸು ಸ್ಥಿತಿ ಬಗ್ಗೆಯು ನೋಡಬೇಕಿದೆ. ಮುಂದಿನ ದಿನಗಳಲ್ಲಿ ಕೆಲ ಸಮುದಾಯಗಳಿಗೆ ಸಹಾಯಧನ ನೀಡುವ ಬಗ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು.
ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಸ್ಟಾಪ್ ಡ್ಯೂಟಿಗೆ ರಿಯಾಯಿತಿ ಕೊಡುವ ಬಗ್ಗೆ ಚಿಂತನೆ ನಡೆದಿದೆ. ತಮಿಳುನಾಡು ಸರ್ಕಾರ ಅಪಾರ್ಟ್‍ಮೆಂಟ್ ರಿಜಿಸ್ಟರ್ ನಲ್ಲಿ ನೋಂದಣಿ ಶುಲ್ಕದಲ್ಲಿ ರಿಯಾಯಿತಿ ಕೊಟ್ಟಿದೆ. ಈ ಬಗ್ಗೆ ಇಂದು ಸಂಜೆ ಸಿಎಂ ಜತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಕೊರೊನಾ ಸಂಕಷ್ಟದಲ್ಲಿ ಹಣಕಾಸಿನ ತೊಂದರೆ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಆರ್ ಆಶೋಕ್ ಅವರು ಹೇಳಿದ್ದಾರೆ.