Breaking News
Home / ಜಿಲ್ಲೆ / ಬೆಂಗಳೂರು / ಪಕ್ಷಾಂತರ ನಿಷೇಧ ಕಾಯಿದೆ : ನಾಳೆ ಸಂಸದೀಯ ಗಣ್ಯರ ಸಭೆ

ಪಕ್ಷಾಂತರ ನಿಷೇಧ ಕಾಯಿದೆ : ನಾಳೆ ಸಂಸದೀಯ ಗಣ್ಯರ ಸಭೆ

Spread the love

ಬೆಂಗಳೂರು, ಮೇ 27- ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬಂಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಕಾರಿಗಳಿಗೆ ಲಭ್ಯವಿರುವ ಅಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ನಾಳೆ ಬೆಳಿಗ್ಗೆ 10.30 ಕ್ಕೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ, ಸರ್ಕಾರದ ಮುಖ್ಯ ಸಚೇತಕ ವಿ.ಸುನೀಲï ಕುಮಾರ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ,

ಸಚಿವಾರದ ಜೆ.ಸಿ.ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಎಸ್.ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್, ಶಾಸಕರಾದ ಕೆ.ಜಿ.ಬೋಪಯ್ಯ, ಉಮೇಶ್ ವಿಶ್ವನಾಥ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಪ್ರತಿನಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಆರ್.ವಿ.ದೇಶಪಾಂಡೆ, ಹೆಚ್.ಕೆಪಾಟೀಲï, ಕೃಷ್ಣ ಬೈರೇಗೌಡ, ಅಜಯ್ ಧರ್ಮಸಿಂಗ್ ಮತ್ತು ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಪ್ರತಿನಿಗಳಾಗಿ ಹಾಗೂ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ,

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಶಿವಲಿಂಗೇಗೌಡ, ವೆಂಕಟರಾವ್ ನಾಡಗೌಡ ಮತ್ತು ಎ.ಟಿ.ರಾಮಸ್ವಾಮಿ ಅವರು ಜಾತ್ಯಾತೀತ ಜನತಾದಳ ಪಕ್ಷದ ಪ್ರತಿನಿಗಳಾಗಿ ಭಾಗವಹಿಸಲಿದ್ದಾರೆ.ಅಲ್ಲದೆ, ಅಡ್ವೊಕೇಟï ಜನರಲï ಪ್ರಭುಲಿಂಗ ಕೆ ನಾವಡಗಿ ಮತ್ತು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ವೈ.ವಟವಟಿ ಅವರು ಸಭೆಯಲ್ಲಿ ಹಾಜರಿರುತ್ತಾರೆ ಎಂದು ಅಕೃತ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ