Breaking News

ಐರ್ಲೆಂಡ್‍ನ ದುಬ್ಲಿನ್ ನಿಂದ ಬೆಂಗಳೂರಿಗೆ ಬಂದಿಳಿದ 136 ಪ್ರಯಾಣಿಕರು ……

Spread the love

ಬೆಂಗಳೂರು, ಮೇ 28- ಐರ್ಲೆಂಡ್‍ನ ದುಬ್ಲಿನ್‍ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತನೇ ಏರ್ ಇಂಡಿಯಾ ವಿಮಾನದಲ್ಲಿ 136 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ ಬಂದಿಳಿದ ಒಟ್ಟು 136 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 75 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ.

ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡು ಬಂದಿರುವುದಿಲ್ಲ.

ಹೀಗಾಗಿ 136 ಪ್ರಯಾಣಿಕರನ್ನು 14 ದಿನಗಳವರೆಗೆ ಕ್ವಾರಂಟೈನ್ ಗಾಗಿ ಹೋಟೆಲ್‍ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

Spread the loveಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ