ಶಿರಸಿ : ನಮ್ಮ ಎದುರಾಳಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು ಪದಗ್ರಹಣ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.
ಹೆಚ್ಚು ಜನರು ಸೇರಿಸಿಬಾರದು ಎಂಬ ಆದೇಶದ ಹಿನ್ನೆಲೆ ಕಾರ್ಯಕರ್ತರಿಗೆ ಟಿವಿ ಮೂಲಕ ಪದಗ್ರಹಣ ಸಮಾರಂಭ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಪರೋಕ್ಷವಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದರು.
ಪಕ್ಷವನ್ನು ಬಿಜೆಪಿ ಸರಿಸಮಾನವಾಗಿ ಬೆಳೆಸುವುದು ಅವಶ್ಯವಾಗಿದೆ. ಆದ ಕಾರಣ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಬೇಕು. ಯಾರು ನಿಷ್ಠೆಯಿಂದ ಕೆಲಸ ಮಾಡುತ್ತಾರೋ ಅವರಿಗೆ ಪಕ್ಷದಲ್ಲಿ ಉತ್ತಮ ಸ್ಥಾನಗಳು ದೊರೆಯಲಿವೆ ಎಂದು ಹೇಳಿದರು.
ಇದೇ ವೇಳೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಮುಖಂಡರು ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯಕ, ಮಾಜಿ ಶಾಸಕರಾದ ಜೆ.ಡಿ ನಾಯಕ, ಶಾರದಾ ಶೆಟ್ಟಿ ಸೇರಿದಂತೆ ಇತರರು ಇದ್ದರು