Home / ನವದೆಹಲಿ / ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.

ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.

Spread the love

ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ.

ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್‍ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು ಮತ್ತು ವಿಮಾನಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪುನರಾರಂಭಗೊಂಡಿವೆ ಎಂದು ತಿಳಿಸಿದರು

ಆರ್ಥಿಕತೆಯ ಪ್ರಮುಖ ಭಾಗವು ಈಗ ಸಕ್ರಿಯವಾಗಿದೆ. ಜನರು ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಉಳಿಯಲು ಪ್ರಯತ್ನಿಸಬೇಕು. ನಾವು ಈಗ ಹೆಚ್ಚು ಜಾಗರೂಕರಾಗಿರಬೇಕಿದೆ. ಎಲ್ಲರ ಬೆಂಬಲವಿದ್ದರೆ ಕೊರೊನಾ ವಿರುದ್ಧ ಹೋರಾಟ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ನನ್ನ ಹೃದಯವನ್ನು ಮುಟ್ಟಿದ ಇನ್ನೊಂದು ವಿಷಯವೆಂದರೆ ಈ ಬಿಕ್ಕಟ್ಟಿನ ಕ್ಷಣದಲ್ಲಿ ಸಂಶೋಧನೆ ನಡೆಸಿರುವುದು. ಹಳ್ಳಿಗಳು ಮತ್ತು ನಗರಗಳಿಂದ, ಸಣ್ಣ ಪ್ರಮಾಣದ ವ್ಯಾಪಾರಿಗಳಿಂದ ಹಿಡಿದು ಸ್ಟಾರ್ಟ್‍ಅಪ್‍ಗಳವರೆಗೆ ಅನೇಕರು ಕೊರೊನಾ ವಿರುದ್ಧ ಹೋರಾಡುವ ಹೊಸ ಮಾರ್ಗಗಳನ್ನು ರೂಪಿಸಿದ್ದಾರೆ. ನಾಸಿಕ್ ರೈತ ರಾಜೇಂದ್ರ ಎಂಬವರು ತಮ್ಮ ಗ್ರಾಮದಲ್ಲಿ ಕೊರೊನಾ ನಿಯಂತ್ರಿಸಲು ತಮ್ಮ ಟ್ರ್ಯಾಕ್ಟರ್ ನಿಂದ ಸ್ಯಾನಿಟೈಜರ್ ಸಿಂಪಡಣೆ ಮಾಡುತ್ತಿದ್ದಾರೆ. ಇಂತಹ ಹೊಸ ಹೊಸ ಸಂಶೋಧನೆಗಳಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ಸಹಾಯಕವಾಗಲಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿದೆ ಎಂದು ಹೇಳಿದರು.

ನಾವು ಇತರ ದೇಶಗಳನ್ನು ನೋಡಿದಾಗ ಭಾರತೀಯರ ಸಾಧನೆ ಎಷ್ಟು ದೊಡ್ಡದಾಗಿದೆ ಎಂದು ನಮಗೆ ಅರ್ಥವಾಗುತ್ತದೆ. ನಮ್ಮ ದೇಶದ ಜನಸಂಖ್ಯೆಯು ಇತರ ದೇಶಗಳಿಗಿಂತ ಹಲವು ಪಟ್ಟು ಹೆಚ್ಚಾಗಿದೆ. ಆದರೂ ಕೊರೊನಾ ವೈರಸ್ ಇತರ ದೇಶಗಳಂತೆ ವೇಗವಾಗಿ ಹರಡಲಿಲ್ಲ ಹಾಗೂ ಸಾವು ಕೂಡ ಹೆಚ್ಚಾಗಲಿಲ್ಲ. ಪ್ರಸ್ತುತ ದಿನಗಳಲ್ಲಿ ಸಾವಿನ ಪ್ರಮಾಣವೂ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.

ರೈಲ್ವೆ ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕೇಂದ್ರವಾಗಲಿ, ರಾಜ್ಯವಾಗಲಿ, ಸ್ಥಳೀಯ ಸ್ವರಾಜ್ ಸಂಸ್ಥೆಗಳಾಗಲಿ ಎಲ್ಲರೂ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ರೈಲ್ವೆ ನೌಕರರು ಕೊರೊನಾ ವಿರುದ್ಧ ಹೋರಾಟದಲ್ಲಿ ಎಲ್ಲ ರೀತಿ ಸಿದ್ಧರಾಗಿದ್ದಾರೆ. ಅವರು ಕೂಡ ಕೊರೊನಾ ವಾರಿಯರ್ಸ್ ಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

ಸಲೂನ್ ನಡೆಸುತ್ತಿರುವ ತಮಿಳುನಾಡಿನ ಸಿ ಮೋಹನ್ ಎಂಬವರು ಮಗಳ ಮದುವೆಗಾಗಿ 5 ಲಕ್ಷ ರೂ. ಕೂಡಿಟ್ಟಿದ್ದರು. ಆದರೆ ಆ ಹಣವನ್ನು ಸಂಕಷ್ಟದಲ್ಲಿರುವ ಜನರಿಗಾಗಿ ನೀಡಿದ್ದಾರೆ. ಪಂಜಾಬ್‍ನ ಪಠಾಣ್‍ಕೋಟ್‍ನ ಅಂಗವಿಕಲ ರಾಜು ಎಂಬವರು ಇತರರ ಸಹಾಯದಿಂದ 3,000ಕ್ಕೂ ಹೆಚ್ಚು ಮಾಸ್ಕ್ ಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಮಾರಿ 100 ಬಡ ಕುಟುಂಬಗಳಿಗೆ ರೇಷನ್ ವಿತರಿಸಿದ್ದಾರೆ. ಇಂತಹ ಸೇವಾ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕಿದೆ. ಸೇವಾ ಮನೋಭಾವದಿಂದ ಮಾನಸಿಕ ನೆಮ್ಮದಿ, ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು.

ಭಾರತದ ಪೂರ್ವ ಭಾಗವು ಚಂಡಮಾರುತದಿಂದ ಉಂಟಾಗುವ ನೈಸರ್ಗಿಕ ವಿಪತ್ತನ್ನು ಎದುರಿಸುತ್ತಿದ್ದರೆ ದೇಶದ ಅನೇಕ ಭಾಗಗಳು ಮಿಡತೆಗಳ ದಾಳಿಗೆ ಒಳಗಾಗುತ್ತಿವೆ. ಇದರಿಂದ ಮತ್ತಷ್ಟು ತೊಂದರೆ ಉಂಟಾಗಿದೆ ಎಂದು ಹೇಳಿದರು


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ