ಬೆಂಗಳೂರು – ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷ ಮಹೇಶ ಕುಮಟಳ್ಳಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ನೇಮಕಕ್ಕೆ ಧನ್ಯವಾದ ಸಲ್ಲಿಸಿದರು.
ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದು ನಂತರ ರಮೇಶ ಜಾರಕಿಹೊಳಿ ತಿಳಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.
ಇದಾದ ನಂತರ ಕೊಳಗೇರಿ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಠಳ್ಳಿ ಅಧಿಕಾರ ಸ್ವೀಕರಿಸಿದರು. ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.