Breaking News

ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲಸಿದ್ದರಾಮಯ್ಯ

Spread the love

ಬೆಂಗಳೂರು,ಜೂ.4- ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಶಾಲೆಗಳನ್ನು ಜುಲೈ ತಿಂಗಳಿನಲ್ಲಿ ಪುನರಾರಂಭಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಪೋಷಕರು ಆತಂಕಕ್ಕೀಡಾಗಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು ಎಂದು ಹೇಳಿದ್ದಾರೆಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗುತ್ತಿದೆ. ಸರ್ಕಾರ ಎರಡು ತಿಂಗಳ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚಿಸುವುದು ಸೂಕ್ತ ಎಂದಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ