Breaking News

ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. 

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ  ಸಚಿವರ ಅಧ್ಯಕ್ಷತೆಯಲ್ಲಿ   ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು ಹರಡಿದೆ. ಇದೀಗ ತಪಾಸಣೆ ಕಡಿಮೆಗೊಳಿಸಿದರೆ ಸೋಂಕು ಮತ್ತಷ್ಟು ಹರಡುವ ಸಾಧ್ಯತೆಯಿದೆ. ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸಬೇಕು.  ಸರ್ಕಾರ ಘೋಷಿಸಿರುವ ಪ್ಯಾಕೇಜ್ ಲಾಭ ಮಾಲೀಕರ ಜತೆಗೆ ದುಡಿಯುತ್ತಿರುವ ಜನರಿಗೂ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಳೆಗಾಲ ಆರಂಭಗೊಂಡಿರುವುದರಿಂದ ರೈತರು ಹಾಗೂ ವರ್ತಕರ ಹಿತದೃಷ್ಟಿಯಿಂದ ಎಪಿಎಂಸಿ ವಹಿವಾಟು ಒಂದೇ ಕಡೆ ಆರಂಭಿಸಬೇಕು ಎಂದು ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

Spread the loveಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ