Breaking News
Home / ಜಿಲ್ಲೆ / ಬೆಂಗಳೂರು / ಮಾನವೀಯತೆ ಮರೆತ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ

ಮಾನವೀಯತೆ ಮರೆತ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ

Spread the love

ಬೆಂಗಳೂರು: ಹೊಟ್ಟೆನೋವು ಅಂತ ಆಸ್ಪತ್ರೆಗೆ ಬಂದ ರೋಗಿಗೆ ಚಿಕಿತ್ಸೆ ನೀಡದೇ ಆಸ್ಪತ್ರೆ ಸಿಬ್ಬಂದಿ ಕರ್ತವ್ಯದ ಜೊತೆ ಮಾನವೀಯತೆಯನ್ನು ಮರೆತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕಳೆದ ರಾತ್ರಿ ಹೊಟ್ಟೆನೋವು ಅಂತ ಓರ್ವ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದಾನೆ. ಈ ವೇಳೆ ವೈದ್ಯರಿಲ್ಲ ಅಂತ ಹೇಳಿ ಸಿಬ್ಬಂದಿ ರೋಗಿಯನ್ನು ಆಸ್ಪತ್ರೆಯೊಳಗೆ ಸಹ ಕರೆದುಕೊಂಡಿಲ್ಲ. ಹೊರಗೆ ನಿಲ್ಲಿಸಿ ಖಾಸಗಿ ಆಸ್ವತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಉದ್ದಟತನನ ಮಾತುಗಳನ್ನಾಡಿದ್ದಾರೆ.

ಖಾಸಗಿ ಆಸ್ವತ್ರೆಗೆ ಹೋಗಲು ಹಣವಿಲ್ಲ ಅಂತ ರಸ್ತೆಯಲ್ಲೆ ರೋಗಿಯ ನರಳಾಟ ಮಾಡಿದ್ರೂ ಆತನಿಗೆ ಚಿಕಿತ್ಸೆ ನೀಡಲು ಸಿಬ್ಬಂದಿ ಮುಂದಾಗಿಲ್ಲ. ಆಸ್ಪತ್ರೆಯ ಪಕ್ಕದ ಕ್ವಾಟರ್ಸ್ ನಲ್ಲಿಯೇ ವೈದ್ಯರಿದ್ದರೂ ಕೊರೊನಾ ಹೆಸರು ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. . ಸರ್ಕಾರಿ ಆಸ್ವತ್ರೆ ವೈದ್ಯರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

Spread the love ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ