ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ.


ಸಾರಿಗೆ ಸಚಿವರ ಭೇಟಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಬಸ್ ನಿಲ್ದಾಣದಲ್ಲಿರುವ ಕಾರ್ಮಿಕರನ್ನು ಮಾತನಾಡಿಸಿ, ಮಾಹಿತಿ ಪಡೆದುಕೊಂಡರು. ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.
Laxmi News 24×7