Breaking News
Home / ಜಿಲ್ಲೆ / ಧಾರವಾಡ / ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

Spread the love

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ.

ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ ಪ್ರಯಾಣಿಕರ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲಾಡಳಿತ, ಪೊಲೀಸ್, ಆರೋಗ್ಯ, ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಮಾಡುತ್ತಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎಲ್ಲಾ ಕಾರ್ಮಿಕರ ತಪಾಸಣೆ ಬೆಂಗಳೂರಿನಿಂದ ಆಗಮಿಸುವ ಪ್ರಯಾಣಿಕರು ದೂರದ ಊರುಗಳಿಗೆ ತೆರಳ ಬೇಕಿದ್ದರೆ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸುವ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಸಾರಿಗೆ ಸಚಿವರ ಭೇಟಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಬಸ್ ನಿಲ್ದಾಣದಲ್ಲಿರುವ ಕಾರ್ಮಿಕರನ್ನು ಮಾತನಾಡಿಸಿ, ಮಾಹಿತಿ ಪಡೆದುಕೊಂಡರು. ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.


Spread the love

About Laxminews 24x7

Check Also

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

Spread the loveಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ