ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು
ಮಹದಾಯಿ ನದಿ ನೀರಿನ ಅಂತರ್ ರಾಜ್ಯಗಳ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರದ ಅಧಿಸೂಚನೆ ಹೊರಡಿಸಿರುವುದನ್ನು ಸ್ವಾಗತಿಸುವುದಾಗಿ ಹೇಳಿದರು. ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ವಿಳಂಬ ಇಲ್ಲದೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಜನರು ತುಂಬಾ ಹೋರಾಟ ಮಾಡಿದ್ದಾರೆ.
ದೆಹಲಿಯ
ನಾಳೆ ಕೆ.ಆರ್. ಪೇಟೆಗೆ ಭೇಟಿ ನೀಡುತ್ತಿದ್ದು, ತೆರಳುತ್ತೇನೆ.ಕಾರ್ಯಕರ್ತರಿಗೆ ತೊಂದರೆಯಾದರೆ ನಾನು ಸಹಿಸುವುದಿಲ್ಲ. ಹೈಕೋರ್ಟ್ ಆದೇಶವಿದ್ದರು ನಮ್ಮ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಡ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೂ ತಂದಿದ್ದೇನೆ. ಸರ್ಕಾರ ಏನು ಕ್ರಮ ಕೈಗೊಳ್ಳುತ್ತೋ ಕಾದು ನೋಡೋಣ ಎಂದರು.
ನಿನ್ನೆ ನಡೆದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾವುಕರಾಗಿದ್ದರು. ತಮ್ಮನ್ನು ಆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಹೋಗಲು ಸಾಧ್ಯವಾಗದೆ ಶುಭಾಶಯದ ಸಂದೇಶವನ್ನು ಕಳುಹಿಸಿಕೊಟ್ಟಿದ್ದೆ ಎಂದರು