Breaking News

ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

Spread the love

ದಾವಣಗೆರೆ: ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ ಆಡಿದ್ದ ಉತ್ತರ ವಲಯದ ಬಿಇಒ ಕಚೇರಿಯ 7 ಜನ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಉತ್ತರ ವಲಯದ ಅಧೀಕ್ಷಕ ಎಚ್.ಎಸ್.ಬಸವರಾಜ್, ಪ್ರಥಮ ದರ್ಜೆ ಸಹಾಯಕ ಎಂ.ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೇಶ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮಲ್ಲಿಕಾರ್ಜುನ್ ಮಠದ, ಶಿಕ್ಷಣ ಸಂಯೋಜಕ ಎಸ್.ಸೋಮಶೇಖರಪ್ಪ, ಡಿ.ಗ್ರೂಪ್ ನೌಕರ ಹರ್ಷವರ್ಧನ್, ಗುಮ್ಮನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎಂ.ವೃಷಬೇಂದ್ರಪ್ಪ ಅಮಾನತುಗೊಂಡವರು.

ಕೊರೊನಾ ಕರ್ತವ್ಯಕ್ಕಾಗಿ ಜಿಲ್ಲಾಡಳಿತವು ಶಿಕ್ಷಣ ಇಲಾಖೆಯ ಕಳೆದ ಕೆಲ ದಿನಗಳ ಹಿಂದೆ ಸಿಬ್ಬಂದಿಯನ್ನು ನೇಮಕ ಮಾಡಿತ್ತು. ಆದರೆ ಕರ್ತವ್ಯವನ್ನು ಮರೆತು ಹಾಗೂ ಲಾಕ್‍ಡೌನ್ ಸಮಯದಲ್ಲಿ ಪಿಬಿ ರಸ್ತೆಯಲ್ಲಿನ ಬಿಲಾಲ್ ಕಾಂಪೌಂಡ್ ಆವರಣದಲ್ಲಿ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿ 7 ಜನ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಬಂಧಿಸಿದ್ದರು. ಅಲ್ಲದೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ