ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್
ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್‍ನಿಂದ ಬಹುಕೋಟಿ ರೂ.ಗಳ ಸಾಲ ಎತ್ತುವಳಿ ನಂತರ ಅದನ್ನು ಹಿಂದಿರುಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ದೊಡ್ಡ ಸಂಸ್ಥೆಗಳಲ್ಲಿ ರಿಲಾಯನ್ಸ್ ಗ್ರೂಪ್ ಸಹ ಒಂದು. ಈ ಹಿನ್ನೆಲೆಯಲ್ಲಿ ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಒಳಪಡುವಂತೆ ಅನಿಲ್ ಅಂಬಾನಿಗೆ ಸೂಚಿಸಲಾಗಿದೆ
