ಬೆಳಗಾವಿ: ಪ್ರೊಬೇಷನರಿ ಉಪವಿಭಾಗಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ವೈದ್ಯಕೀಯ ಪ್ರಮಾಣ ಪತ್ರ ಪಡೆಯಲು ಬೇರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಪ್ರೊಬೇಷನರಿ ಉಪವಿಭಾಗಾಧಿಕಾರಿಗೆ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ಗಂಟಲು ದ್ರವ ಪರೀಕ್ಷೆ ನಡೆಸಿದ ಬಳಿಕ ಸೋಂಕು ಇರುವುದು ದೃಢ ಪಟ್ಟಿದೆ.
ಸೋಂಕಿತ ಅಧಿಕಾರಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯಲಾಗಿದೆ. ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಗೈಯುತ್ತಿರುವವರಿಗೆ ಆತಂಕ ಮನೆ ಮಾಡಿದೆ.
Laxmi News 24×7