ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.
ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.