; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ

Spread the love

; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ

ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು ಕಂಡುಬಂದಿವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು, ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ Covid 19 ಲಕ್ಷಣಗಳಿದ್ದರಿಂದ, ಇವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಳಿದ 189 ಜನರನ್ನು ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯಲ್ಲಿ ಐಸೋಲೇಷನ್​ನಲ್ಲಿ ಇರಿಸಿ, ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

17 ಪಿಎಸ್‌ಐಗಳ ವರ್ಗಾವಣೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ