Breaking News

ಗ್ರಾಮಕ್ಕೆ ಬಂದಿದ್ದ ಆರೋಗ್ಯ ಸಿಬ್ಬಂದಿಗೆ ಕಲ್ಲೆಸದ ಗ್ರಾಮಸ್ಥರು

Spread the love

ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸುವ ಮೂಲಕ ಎಲ್ಲರ ಆರೋಗ್ಯದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಡಾಕ್ಟರ್, ನರ್ಸ್ ಗಳನ್ನು ಒಳಗೊಂಡ ತಂಡ ಟಾಟಪಟ್ಟಿ ಇಲಾಖೆಯ ಗ್ರಾಮಕ್ಕೆ ಭೇಟಿ ನೀಡಿತ್ತು. ಆದ್ರೆ ಗ್ರಾಮಸ್ಥರು ಸಿಬ್ಬಂದಿಯ ಮೇಲೆ ಕಲ್ಲು ಎಸೆದಿದ್ದಾರೆ. ಇದರಿಂದ ಭಯಗೊಂಡು ಸಿಬ್ಬಂದಿ ಜೀವ ಉಳಿಸಿಕೊಂಡು ಓಡಿ ಬರುತ್ತಿರುವ ದೃಶ್ಯಗಳು ಮೊಬೈಲಿನಲ್ಲಿ ಸೆರೆಯಾಗಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಎಸ್‍ಪಿ ರಾಜೇಶ್ ವ್ಯಾಸ, ಸಿಲ್ವಾಟಪುರ ಗ್ರಾಮದ ನಿವಾಸಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದರು. ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಎಲ್ಲರ ಆರೋಗ್ಯವನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕೆಲವರು ಸಿಬ್ಬಂದಿ ಮೇಲೆ ಕಲ್ಲು ಎಸೆದಿದ್ದಾರೆ. ಹೀಗಾಗಿ ಸಿಬ್ಬಂದಿ ಗ್ರಾಮದಿಂದ ಹೊರ ಬಂದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

Spread the love ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ