Breaking News

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

Spread the love

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ.

ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. ಪೋಷಕರು ಮಕ್ಕಳ ಹುಡುಕಾಟ ನಡೆಸಿದ್ದಾರೆ.ಈ ವೇಳೆ ಮನೆಯಿಂದ 200 ಮೀಟರ್ ದೂರದಲ್ಲಿರುವ ಕೆರೆಯಲ್ಲಿ ಮಕ್ಕಳ ಶವ ಪತ್ತೆಯಾಗಿದೆ.

ಸ್ಥಳೀಯರು ತಕ್ಷಣ ಮಕ್ಕಳನ್ನು ಕನ್ನಂಗಾಡಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಕ್ಕಳು ಅದಾಗಲೇ ಮೃತಪಟ್ಟರೆಂದು ವೈದ್ಯರು ದೃಢಪಡಿಸಿದರು


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ