Home / ಜಿಲ್ಲೆ / ದಕ್ಷಿಣ ಕನ್ನಡ / ಮಂಗಳೂರು: ಬೇಳೂರು ಪ್ರದೇಶದ ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು

ಮಂಗಳೂರು: ಬೇಳೂರು ಪ್ರದೇಶದ ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು

Spread the love

ಮಂಗಳೂರು: ಬೇಳೂರು ಪ್ರದೇಶದ ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು ತಗುಲಿದೆ.

ಮೊದಲು ವೃದ್ಧೆ (ರೋಗಿ-536)ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಾದಾಗ ವೃದ್ಧೆಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ತದನಂತರ ವೃದ್ಧೆಯ ಪತಿ, ಅಳಿಯ, ಮಗಳು ಮತ್ತು ಮೊಮ್ಮಗಳಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.

ಎಲ್ಲರಿಗೂ ಮಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೃದ್ಧೆಯ ಆರೋಗ್ಯ ತೀವ್ರ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಒಟ್ಟು 13 ಮಂದಿಗೆ ಕೊರೊನಾ ಹರಡಿದ್ದು, ಎಲ್ಲರೂ ಈಗ ವೆನ್ಲಾಕ್ ಮತ್ತು ಫಸ್ಟ್ ನ್ಯೂರೋ ಐಸೊಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕ ಇರುವ ಬಹಳಷ್ಟು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, 15 ದಿನಗಳ ಬಳಿಕ ಕೆಲವರಲ್ಲಿ ಸೋಂಕು ದೃಢಪಡುತ್ತಿದೆ.


Spread the love

About Laxminews 24x7

Check Also

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

Spread the loveಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ