ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್‍ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಗುರುವಾರ ಹೊರಡಿಸಲಾದ ಆದೇಶದಲ್ಲಿ ಕರ್ಫ್ಯೂ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮತ್ತು ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್ ಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತೆರವುಗೊಳಿಸಿದ್ದಾರೆ.
ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್ ಗಳು ಪ್ರಯಾಣಿಕರನ್ನು ಬಸ್ ಸ್ಟ್ಯಾಂಡ್/ ಪಿಕ್ ಅಪ್ ಪಾಯಿಂಟ್ ಗಳಲ್ಲಿ ಕರೆದೊಯ್ಯಲು ಮತ್ತು ಕರೆತರಲು ಸಹ ಅನುಮತಿ ನೀಡಲಾಗಿದೆ.
Laxmi News 24×7