ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ 100 ಜನ ಕೊರೋನಾ ಶಂಕಿತರ ಮೇಲೆ ನಿಗಾ/ಕೊರೋನಾ ವೈರಸ್ ತಡೆಯಲು ಸರ್ಕಾರ ಸನ್ನದ್ಧ/ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ
ಸರಕಾರ ಕೊರೋನಾ ಎದುರಿಸಲು ಸನ್ನದ್ದವಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ 100ಜನ ಕರೋನಾ ಶಂಕಿತರ ಮೇಲೆ ನಿಗಾ ಇಡಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಾಂತೇಶ್ ಕವಟಗಿಮಠ ಅವರ ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಾಗ ಮಾಧ್ಯಮದೊಂದಿಗೆ ಮಾತನಾಡಿ ಕರೋನಾ ತಡೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 6 ಜನರ ಮೇಲೆ ಕರೋನಾ ಪತ್ತೆಯಾಗಿದೆ. 100 ಜನರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಆದ್ದರಿಂದ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.