Breaking News

ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ

Spread the love

ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಅಹವಾಲುಗಳನ್ನು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಎಚ್‍ಎಸ್‍ಆರ್ ಲೇಔಟ್ ಬಳಿಯ ಆಕ್ಸ್‍ಫರ್ಡ್ ಮ್ಯಾನೇಜ್‍ಮೆಂಟ್ ಕಾಲೇಜಿನ ಸಭಾಂಗಣದಲ್ಲಿ ಪ್ರಬುದ್ಧಗೋಷ್ಠಿ ಸಂಜೆ 6 ಗಂಟೆಗೆ ನಿಗದಿಯಾಗಿದ್ದು, ಇದಕ್ಕೂ ಮುನ್ನವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಇಂದು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ನೇರವಾಗಿ ಪಕ್ಷದ ಕಚೇರಿ ಅಥವಾ ಕುಮಾರ ಕೃಪಾ ಅತಿಥಿ ಗೃಹದಲ್ಲಿದ್ದು, ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಇದರ ನಡುವೆ ಕೆಲವರು ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ

.ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಸಾರಥ್ಯ ನೀಡಿರುವುದರಿಂದ ಕಾಂಗ್ರೆಸ್‍ನಲ್ಲಿ ಕೆಲವೊಂದು ಬದಲಾವಣೆಗಳಾಗಿದ್ದು, ಪಕ್ಷ ಸಂಘಟನೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇರುವುದನ್ನು ಮನಗಂಡಿರುವ ಕಮಲ ಪಾಳಯ ಅದಕ್ಕೆ ಪ್ರತಿಯಾಗಿ ತಮ್ಮ ಪಡೆಯನ್ನು ಕೂಡ ಸಜ್ಜುಗೊಳಿಸುವುದು ಮತ್ತು ಪ್ರಬಲವಾಗಿ ಕಾಂಗ್ರೆಸ್ ಎದುರಿಸುವ ಕುರಿತಂತೆಯೂ ಕೆಲ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.ಅಧಿವೇಶನ ಮುಗಿದ ನಂತರ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹಮತ ವ್ಯಕ್ತಪಡಿಸುತ್ತಾರೆ ಎಂಬ ಭಾವನೆ ಬಿಜೆಪಿ ಪಾಳಯದಲ್ಲಿದೆ. ಇದಕ್ಕೆ ಜೆ.ಪಿ.ನಡ್ಡಾ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ