Breaking News

ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯಾಗುವುದಿಲ್ಲ: ಶೋಭಾ ಕರಂದ್ಲಾಜೆ

Spread the love

ಉಡುಪಿ: ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ದೇವಸ್ಥಾನ ಧ್ವಂಸ ವಿಚಾರದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆಯ ವಿಚಾರವಾಗಿ ಉಡುಪಿಯಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅಕ್ರಮ ಸ್ಥಳಗಳಲ್ಲಿ ಶ್ರದ್ಧಾ ಕೇಂದ್ರಗಳು ನಿರ್ಮಾಣವಾಗಿದ್ದರೆ ಪೂರ್ವ ಸೂಚನೆ ನೀಡಬೇಕು. ತೆರವುಗೊಳಿಸುವುದು ಸಲ್ಲದು ಎಂದರು.

ರಾಜ್ಯದಲ್ಲಿ ದೇವಸ್ಥಾನ, ಮಸೀದಿ, ಚರ್ಚ್‌ಗಳ ಮೇಲೆ ಜನರು ಹೆಚ್ಚು ನಂಬಿಕೆ ಇಟ್ಟುಕೊಂಡಿರುತ್ತಾರೆ. ಭಕ್ತಿ ಭಾವ ಹೆಚ್ಚಾಗಿರುತ್ತದೆ. ಶ್ರದ್ಧಾ ಕೇಂದ್ರಗಳು ತೆರವಾದಾಗ ಜನರ ಭಾವನೆಗಳಿಗೆ ಸಹಜವಾಗಿ ನೋವಾಗುತ್ತದೆ, ಪ್ರತಿಯಾಗಿ ಪ್ರತಿಭಟನೆ ನಡೆಸುತ್ತಾರೆ. ಅಕ್ರಮ ದೇವಾಲಯಗಳ ನಿರ್ಮಾಣ ಮಾಡಿರುವುದು ಕಂಡು ಬಂದರೆ ಸ್ಥಳೀಯ ಊರಿನ ಜನರ ಮನವೊಲಿಸಬೇಕು. ದೇವಸ್ಥಾನಗಳ ನಿರ್ಮಾಣಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಆನಂತರ ತೆರವು ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ವಿಚಾರವಾಗಿ ಪ್ರತಿಯಿಸಿದ ಸಚಿವೆ ಶುಕ್ರವಾರ ಲಖನೌನಲ್ಲಿ ಜಿಎಸ್‌ಐ ಕೌನ್ಸಿಲ್ ಮಹತ್ವದ ಸಭೆ ನಡೆಯುತ್ತಿದೆ. ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದರೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಆಗಬಹುದು. ಪ್ರಧಾನಿ ನರೇಂದ್ರ ಮೋದಿ ಅವರೂ ಇದೇ ಪ್ರಯತ್ನದಲ್ಲಿದ್ದಾರೆ. ಸಭೆಯಲ್ಲಿ ಜನರ ಪರವಾಗಿ ಕೈಗೊಳ್ಳಬಹುದಾದ ನಿರ್ಧಾರವನ್ನು ದೇಶ ಸ್ವಾಗತಿಸುತ್ತದೆ‌ ಎಂಬ ನಂಬಿಕೆ ಇದೆ ಎಂದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ