ಬೆಂಗಳೂರು: ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.
ಇಲ್ಲಿನ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ ಅವರನ್ನು ಸಿದ್ಧರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು
ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿದ್ಧರಾಮಯ್ಯ ಅವರ ಜೊತೆ ಶಿವಕುಮಾರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ ಕೂಡ ಈ ಸಂದರ್ಭದಲ್ಲಿ ಇದ್ದರು