ನಿಪ್ಪಾಣಿ ಮತಕ್ಷೇತ್ರದ ಕಾರದಗಾ- ಭೋಜ ಗ್ರಾಮಗಳ ನಡುವೆ ದೂಧಗಂಗಾ ನದಿಗೆ ಅಡ್ಡಲಾಗಿ, ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಮಂಜೂರಾದ 13.67 ಕೋಟಿ ರೂ. ಮೊತ್ತದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ನಿರ್ಮಿಸುತ್ತಿರುವ ಈ ಸೇತುವೆ 77 ಅಡಿ ಎತ್ತರ, 441 ಮೀಟರ್ ಉದ್ದ ಹಾಗೂ 31 ಮೀಟರ್ ಅಗಲವಿರಲಿದ್ದು, ಇಕ್ಕೆಲಗಳಲ್ಲಿ ಫುಟ್ ಪಾತ್ ವ್ಯವಸ್ಥೆ ನಿರ್ಮಾಣವಾಗಲಿದೆ. ಈ ಭಾಗದಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂಬುದು ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿ ಈ ನದಿ ಭರ್ತಿಯಾಗಿ ರಸ್ತೆಗಳು ಮುಳುಗಡೆಯಾಗುತ್ತಿದ್ದವು. ಇದರಿಂದಾಗಿ ಊರಿಂದೂರಿಗೆ ಸಂಪರ್ಕ ಕಡಿತವಾಗಿ, ಜನರು ಸಂಕಷ್ಟ ಅನುಭವಿಸುತ್ತಿದ್ದರು. ಇದನ್ನು ಮನಗಂಡು ಸೇತುವೆ ನಿರ್ಮಿಸುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಮುಂದಾಗಿದ್ದೇವೆ. ಇದರಿಂದ ಈ ಭಾಗದ ಜನರಿಗೆ ವರದಾನವಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಜನಪ್ರತಿನಿಧಿಗಳು,ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
 Laxmi News 24×7
Laxmi News 24×7
				 
		 
						
					