ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.3 ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.
ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಜೂನ್ 3 ಕ್ಕೆ ಮುಂದೂಡಿ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಾಕ್ಷಿ ವಿಚಾರಣೆಗೆ ಆರೋಪಿ ಪರ ವಕೀಲ ಕೆ.ಬಿ.ಕೆ ಸ್ವಾಮಿ 2 ದಿನಗಳ ಕಾಲಾವಕಾಶ ಕೇಳಿದ ಹಿನ್ನೆಲೆ ವಿಚಾರಣೆಯನ್ನು ಮುಂದೂಡಲಾಗಿದೆ.
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆಗೆ ಆಕೆಯ ಚಿಕ್ಕಪ್ಪನೇ ಪ್ರಕರಣದಿಂದ ಹಿಂದೆ ಸರಿಯಲು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಆತನ ವಿರುದ್ಧ FIR ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಿತ್ತು. ತನ್ನ ತಂದೆಯ ಅನಾರೋಗ್ಯದ ಕಾರಣಕ್ಕೆ 17 ವರ್ಷದ ಅಪ್ರಾಪ್ತೆ ಚಿಕ್ಕಪ್ಪನ ಆಶ್ರಯದಲ್ಲಿದ್ದು, ಈ ಸಂದರ್ಭದಲ್ಲಿ ಪ್ರಕರಣದಿಂದ ಹಿಂದೆ ಸರಿಯುವಂತೆ ಆತ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅಲ್ಲದೆ ಬಾಲಕಿಗೆ ಹಣ, ಚಿನ್ನಾಭರಣ ನೀಡುವ ಆಮಿಷವನ್ನೂ ಒಡ್ಡಲಾಗಿತ್ತು ಎಂದು ಹೇಳಲಾಗಿತ್ತು
Laxmi News 24×7