Breaking News
Home / ರಾಜಕೀಯ / ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ: H.D.K.

ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ: H.D.K.

Spread the love

ಬೆಂಗಳೂರು, ಮೇ 28: ಜಿಂದಾಲ್‌ಗೆ ಭೂಮಿ ಮಾರಾಟ ಹಿಂದಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ.

ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಜಿಂದಾಲ್ ಪ್ರಕರಣ ಒಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಲೇವಡಿ ಮಾಡಿದ್ದಾರೆ.

 

 

ಜಿಂದಾಲ್‌ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಇಲ್ಲ ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ “ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the loveಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ