Breaking News

ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಹೆಸರಲ್ಲಿ ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಮೀರ್‌ ಉಲ್ಲಾ ಬಂಧಿತ ಆರೋಪಿ. ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸಮೀರ್ ಉಲ್ಲಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡಿರುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.

ಈ ವಿಡಿಯೋವನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋವನ್ನು ಪ್ರಕಟಿಸಿದ ಕಿಡಿಗೇಡಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್‌ ದಾಖಲಿಸುವುದಾಗಿ ಇಂದು ಎಚ್ಚರಿಕೆ ನೀಡಿದ್ದಾರೆ.

ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್‌ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಆಸ್ಪತ್ರೆಗೆ ಸಂಬಂಧಿಸಿದೆ ಎಂದು ವಿಡಿಯೋ ಹರಿಬಿಟ್ಟವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರ, ಸಮಾಜ ಕೋವಿಡ್‌ 19 ವಿರುದ್ಧ ಹೋರಾಟ ಮಾಡುತ್ತಿದ್ದರೆ ಕೆಲವರು ಸಮಾಜ ಭಯ ಪಡುವಂತಹ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಏನಿದು ವಿಡಿಯೋ?
“ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮುಂದೆ ನಿಂತಿರುವ ರೋಗಿಗಳನ್ನು ನೋಡಿ” ಎಂದು ಬರೆಯಲಾಗಿರುವ ಸುಳ್ಳು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಕ್ಟೋರಿಯಾ ಆಸ್ಪತ್ರೆ ಬಳಿ ಸೋಂಕು ಪರೀಕ್ಷೆ ಮಾಡಿಸಲು ಜನ ಕ್ಯೂ ನಿಂತಿದ್ದಾರೆ. ಅಲ್ಲದೆ ನೂರಾರು ಜನರಿಂದ ವೈದ್ಯರಿಗೆ ತೊಂದರೆಯಾಗುತ್ತಿದೆ ಎಂದು  ವಿಡಿಯೋದಲ್ಲಿ ಬರೆಯಲಾಗಿದೆ.

ಭಾರತದ ಯಾವುದೋ ಆಸ್ಪತ್ರೆಯ ಒಪಿಡಿ ವಿಭಾಗದ ವಿಡಿಯೋ ಆಗಿದ್ದು, ವಿಕ್ಟೋರಿಯಾ ಆಸ್ಪತ್ರೆಯದ್ದಲ್ಲ. ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಹಿಂದಿಯಲ್ಲಿ ವೈದ್ಯರು ಸೂಚನೆ ನೀಡುತ್ತಿರುವುದು ಕೇಳಿಸುತ್ತದೆ.

 


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ