ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಂತರ ನೀರು ಯೋಜನೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು.
ಯೋಜನೆಯ ತುರ್ತು ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ನೆರವು ಸರ್ಕಾರ ನೀಡಲಿದೆ ಎಂದು ಸಚಿವ ಬಸವರಾಜ್ ಭರವಸೆಯನ್ನು ನೀಡಿದರು.
ಆರ್.ಎಫ್.ಐ.ಡಿ. ಟ್ಯಾಗ್ ವೈಫಲ್ಯ -ವರದಿ ಸಲ್ಲಿಸಲು ಸೂಚನೆ:
ಬೆಳಗಾವಿ ನಗರದಲ್ಲಿ ಸುಮಾರು ಒಂದು ಲಕ್ಷ ಆರ್.ಎಫ್.ಐ.ಡಿ. ಟ್ಯಾಗ್ ಅಳವಡಿಸಲಾಗಿದೆ. ಆದರೆ ಅದರಲ್ಲಿ ಕೇವಲ ಮೂರ್ನಾಲ್ಕು ಸಾವಿರ ಕಾರ್ಡುಗಳು ಮಾತ್ರ ರೀಡ್ ಮಾಡಲಾಗುತ್ತಿದೆ ಎಂದು ಶಾಸಕ ಅಭಯ್ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
46 ಕೋಟಿ ರೂಪಾಯಿ ವೆಚ್ಚದ ಆರ್.ಎಫ್.ಐ.ಡಿ. ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.