Breaking News

CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?

Spread the love

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್‌ಲೈನ್ ಮೋಡ್‌ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ.

 

‘ಕ್ಯಾನ್ಸಿಲ್ಬೋರ್ಡೆಕ್ಸ್ 2021’ ಎಂಬ ಹ್ಯಾಶ್‌ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲಾಗುವುದರಿಂದ ಸಿಬಿಎಸ್‌ಇ 10, 12 ಬೋರ್ಡ್ ಪರೀಕ್ಷೆ 2021 ಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದೆ.

ಸಿಬಿಎಸ್‌ಇ ಹಿರಿಯ ಅಧಿಕಾರಿಯೊಬ್ಬರು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಂಡಳಿ ಸಮರ್ಪಕ ವ್ಯವಸ್ಥೆ ಮಾಡುತ್ತಿದೆ ಎಂದು ಹೇಳಿದರು. ಸಾಮಾಜಿಕ ಅಂತರವನನ್ನ ಕಾಯ್ದುಕೊಳ್ಳಲು ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 40-50 ಪ್ರತಿಶತಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

‘ಭಾರತದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ದೇಶದಲ್ಲಿ ಕೆಲವೇ ಪ್ರಕರಣಗಳು ಇದ್ದಾಗ, ಉಳಿದ ಬೋರ್ಡ್ ಪರೀಕ್ಷೆಗಳನ್ನ ಅವರು ರದ್ದುಗೊಳಿಸಿದರು ಮತ್ತು ಈಗ ಪ್ರಕರಣಗಳು ಉತ್ತುಂಗದಲ್ಲಿದ್ದಾಗ ಶಾಲೆಗಳನ್ನು ತೆರೆಯಲು ಯೋಜಿಸುತ್ತಿವೆ. ನಾವು ಶಿಕ್ಷಣ ಸಚಿವರನ್ನು ಒತ್ತಾಯಿಸುತ್ತೇವೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಒತ್ತಡಕ್ಕೆ ಸಿಲುಕಿರುವ ಕಾರಣ ಈ ವರ್ಷ ನಡೆಯಲಿರುವ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಿ ‘ಎಂದು ಟ್ರಸ್ಟಿ ಅರ್ಜಿಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ