Breaking News

O.Y.C.ರ್ಯಾಲಿ ಸುಮಾರು 300 ಜನರ ವಿರುದ್ಧ ಪ್ರಕರಣ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ: ಲತೀಫ್ ಖಾನ್ ಪಠಾಣ್

Spread the love

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕಾಗಿ ಎಂಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಪ್ರಚಾರದ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಪಾಲಿಸಿಲ್ಲ ಎನ್ನುವ ಕಾರಣದಿಂದ ಸುಮಾರು 300 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಲತೀಫ್ ಖಾನ್ ಪಠಾಣ್, ಝೋಯಾ ಡೋಣಿ, ಮುಸ್ತಾಕ್ ಅಹ್ಮದ್ ಶಫಿ ತಹಸಿಲ್ದಾರ್ ಸೇರಿದಂತೆ 300 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಕೊರೋನಾ ನಿಯಮ ಉಲ್ಲಂಘಿಸಲಾಗಿದೆ ಮತ್ತು ಚುನಾವಣೆ ಆಯೋಗ ವಿಧಿಸಿದ ಷರತ್ತುಗಳನ್ನು ಪಾಲಿಸಲಾಗಿಲ್ಲ ಎನ್ನುವ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

ಇದೀಗ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. 2ನೇ ಜೆಎಂಎಫ್ ಸಿ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಎಂದು ಲತೀಫ್ ಖಾನ್ ಪಠಾಣ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ