ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ.
ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರದವರಾಗಿದ್ದು, ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಟ್ಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.