ಬಳ್ಳಾರಿ: ನೀವು ದಲಿತ ಸಿಎಂ ಮಾಡುತ್ತೇವೆ ಎಂದು ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ ಸಿದ್ದರಾಮಯ್ಯನವರೇ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಈ ದೇಶದ ಪ್ರಧಾನಿಯಾದವರು, ಆದರೆ ಸಿದ್ದರಾಮಯ್ಯ ದೇವೇಗೌಡರಿಗೆ ಏಕ ವಚನ ಪ್ರಯೋಗ ಮಾಡುತ್ತಿದ್ದಾರೆ. ರಾಜಕೀಯ ವಿಚಾರದಲ್ಲಿ ದೇವೇಗೌಡರಿಗೆ ನಿಮ್ಮ ತಾಯಿ, ಮಕ್ಕಳ ಮೇಲೆ ಆಣೆ ಮಾಡಿ ಎಂದು ಕೀಳಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದ ಅವರು, ಅವರಿವರ ಮಕ್ಕಳ ಮೇಲೆ ಆಣೆ ಮಾಡಿ ಎನ್ನುವ ನೀವು ಮೊದಲು ನಿಮ್ಮ ಮಕ್ಕಳ ಮೇಲೆ ಆಣೆ ಮಾಡಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.