Breaking News
Home / Uncategorized / ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ

ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ

Spread the love

ಮಂಗಳೂರು: ಏಕಾಏಕಿ ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.

ದಿನೇಶ್ ಕೊಟ್ಟಿಂಜ ದಾಳಿಗೊಳಗಾದ ಫೋಟೋಗ್ರಾಫರ್. ಇವರು ಫರಂಗಿಪೇಟೆಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ ದಾಳಿ ಮಾಡಿದ್ದಾರೆ.

ಘಟನೆಯಿಂದ ಗಂಭೀರ ಗಾಯಗೊಂಡ ದಿನೇಶ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಹಾಗೂ ಎಸ್.ಐ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರಜ್ವಲ್‌ ರೇವಣ್ಣ ಪತ್ತೆಗಾಗಿ ಎಸ್‌ಐಟಿ ತಂಡ ಹುಡುಕಾಟ, ಖಚಿತತೆ ಸಿಕ್ಕಿಲ್ಲ

Spread the love ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗಾಗಿ ವಿಶೇಷ ತನಿಖಾ ತಂಡವು (ಎಸ್‌ಐಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ