ಪತ್ತನಂತಿಟ್ಟ: ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದಾಳೆ.
ಕೇರಳದ ಅಂಬಾಲಪುಳದಲ್ಲಿ ಈ ಘಟನೆ ನಡೆದಿದೆ.
ಥೋಪುಂಪಡಿ ನಿವಾಸಿ ಸುನೀಶ್ ಅಲಿಯಾಸ್ ಅಪ್ಪು (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 25ರ ರಾತ್ರಿ 10 ಗಂಟೆ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಕಾಂಪೌಂಡ್ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿದ ಆರೋಪಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆರಗಿ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ವೃದ್ಧೆ ಒಬ್ಬಳೇ ಇರುವುದನ್ನು ಗಮನಿಸಿ ಆರೋಪಿ ಸಂಚು ಹಾಕಿ ಕೃತ್ಯ ಎಸಗಿದ್ದಾನೆಂದು ಹೇಳಲಾಗಿದೆ.
ಅತ್ಯಾಚಾರಕ್ಕೆ ಒಳಗಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಸಂಬಂಧಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನರ್ಸ್ ಬಳಿ ನಡೆದ ಎಲ್ಲ ಘಟನೆಯನ್ನು ವೃದ್ಧೆ ವಿವರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಪೆರುಮಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ಘಟನೆ ನಡೆದ ಮೂರು ದಿನಗಳ ನಂತರ ವೃದ್ಧೆ ಕೊನೆಯುಸಿರೆಳೆದಿದ್ದಾರೆ.