ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡುವ ನಿರ್ಣಯವನ್ನು ಸರಕಾರ ಅ.19 ರಂದು ನಿರ್ಣಯ ತೆಗೆದುಕೊಳ್ಳದಿದ್ದರೇ 21 ರಂದು ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜಾರಿ ಹೇಳಿದರು.
ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಕ್ಕರೆ ಆಯುಕ್ತ, ಸಕ್ಕರೆ ಸಚಿವರ ಸಭೆಯಲ್ಲಿ ಸಾಕಷ್ಟು ವಿಷಯವನ್ನು ಮಂಡಣೆ ಮಾಡಿದ್ದೇವು. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕೆಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತಿರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅ.19 ರೊಳಗಾಗಿ ಸೂಕ್ತ ದರ ನಿಗದಿ ಮಾಡದಿದ್ದರೆ ಅ.21 ರಂದು ಸುವರ್ಣ ವಿಧಾನಸೌಧದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರಕಾಶ ನಾಯಕ, ರಾಜು ಮೊರವೆ, ರಾಘವೇಂದ್ರ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.