Breaking News

ಬೆಂಗಳೂರಿನ ಚರ್ಚ್ ಸ್ಟ್ರೀಟ್​ನಲ್ಲಿ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ.

Spread the love

ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್​ನಲ್ಲಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ.

ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್​ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ ಕಾರಣ ಯುವತಿಯನ್ನು ಆಟೋದಲ್ಲಿ ಕೂರಿಸಲು ಪೊಲೀಸರೇ ಅಂಗಲಾಚಿದ ಪ್ರಸಂಗ ಎದುರಾಗಿತ್ತು. ಸತತ ಒಂದು ಗಂಟೆ ಕಾಲ ಪ್ರಯತ್ನಿಸಿದ ಬಳಿಕ ಅಂತಿಮವಾಗಿ ಬೇರೆ ಯುವತಿಯರ ಸಹಾಯದಿಂದ ಆಕೆಯನ್ನು ಮನೆಗೆ ಸುರಕ್ಷಿತವಾಗಿ ಕಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ತಿಂಗಳೂ ಸಹ ಕೇಂದ್ರ ವಿಭಾಗದ ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಕೆಲ ವಿದೇಶಿ ಪ್ರಜೆಗಳು ಭಾರಿ ಹೈಡ್ರಾಮಾ ಮಾಡಿದ್ದ ಪ್ರಸಂಗ ಸಹ ನಡೆದಿತ್ತು. ವಶಕ್ಕೆ ಪಡೆಯುವ ಯತ್ನದಲ್ಲಿದ್ದ ಪೊಲೀಸರಿಂದ ತಪ್ಪಿಸಿಕೊಂಡು ಕೆಲ ವಿದೇಶಿ ಪ್ರಜೆಗಳು ದಿಕ್ಕಾಪಾಲಾಗಿ ಓಡಿದ್ದರು. ಇನ್ನೂ ಕೆಲವರು ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದರು.

ಇತರ ಪ್ರಕರಣಗಳು : ಉಡುಪಿಯಲ್ಲಿಯು ಕಳೆದ ನವೆಂಬರ್​ ತಿಂಗಳಿನಲ್ಲಿ ಮೇಲಿನಂಥಹದೇ ಪ್ರಕರಣ ನಡೆದಿತ್ತು. ಇಲ್ಲಿ ಯುವಕ ಯುವತಿ ಇಬ್ಬರು ಮದ್ಯ ಸೇವನೆ ಮಾಡಿ ಪಿಜ್ಜಾ ಶಾಪ್​ಗೆ ಬಂದು ಸಾರ್ವಜನಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ಇಬ್ಬರನ್ನು ಹೊರಕ್ಕೆ ಕಳುಹಿಸಿದ್ದರು. ಆದರೆ ಮದ್ಯದ ಅಮಲಿನಲ್ಲಿದ್ದ ಯುವತಿ ಶಾಪ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಳು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ