Breaking News

ಬೆಳೆಹಾನಿಗೆ2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ

Spread the love

ಬೆಳಗಾವಿ/ಬೆಂಗಳೂರು: ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆಯಾಗುತ್ತಿದ್ದಂತೆ ರೈತರಿಗೆ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

ಅಲ್ಲಿಯವರೆಗೂ ತಾತ್ಕಾಲಿಕವಾಗಿ ಭಾಗಶಃ ಪರಿಹಾರದ ಭಾಗವಾಗಿ 2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ, ಸರ್ಕಾರ ಏನೆಲ್ಲಾ ಮಾಡಬೇಕೋ ಅದನ್ನು ನಿರಂತರವಾಗಿ ಮಾಡುತ್ತಿದ್ದೇವೆ. ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ವಿಪತ್ತು ಪ್ರಾಧಿಕಾರ ಮೂರು ಸಭೆ ಮಾಡಿದೆ, ಸಂಪುಟ ಉಪ ಸಮಿತಿ ಇದೆ, 10 ಸಭೆ ಬರದ ಸಲುವಾಗಿ ಮಾಡಿದ್ದೇವೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲ ಇದೆ, 18 ರಾಜ್ಯಗಳಲ್ಲಿ ಹಿಂಗಾರು ಅವಧಿಯಲ್ಲಿ ಬರಗಾಲ ಆವರಿಸಿದೆ. ಮುಂಗಾರು ಅವಧಿಯಲ್ಲಿ ಸೆಪ್ಟಂಬರ್ 13 ರಂದೇ ರಾಜ್ಯದಲ್ಲಿ ಬರಗಾಲ ಘೋಷಣೆ ಆಗಿತ್ತು. ಬೇರೆ ರಾಜ್ಯಗಳು ನಾವು ಘೋಷಿಸಿದ 2 ತಿಂಗಳ ನಂತರ ಘೋಷಣೆ ಮಾಡಿವೆ, ಇತರ ರಾಜ್ಯಕ್ಕೂ ಮೊದಲು ನಾವಿದ್ದೇವೆ. ಸೆಪ್ಟಂಬರ್ 22 ರಂದು ಮೊದಲ ಮನವಿಯನ್ನು ಕೇಂದ್ರಕ್ಕೆ ಮಾಡಿದ್ದೇವೆ.

ಮೇವಿನ ಕೊರತೆ ಬರಬಹುದು ಎಂದು 7 ಲಕ್ಷ ಬಿತ್ತನೆ ಬೀಜದ ಕಿಟ್ ಗಳನ್ನು ಬರಪೀಡಿತ ತಾಲ್ಲೂಕುಗಳಲ್ಲಿ ರೈತರಿಗೆ ಕೊಟ್ಟಿದ್ದೇವೆ. 90 ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಅದರಲ್ಲಿ 60 ಕಡೆ ಖಾಸಗಿ ಬೋರ್​ವೆಲ್​ ಬಾಡಿಗೆ ಪಡೆದಿದ್ದು, 25 ಕಡೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗ ಸೇರಿ ಕೆಲವಡೆ ಹೆಚ್ಚಿನ ಸಮಸ್ಯೆ ಇದೆ, ಅಲ್ಲಿ ಗೋಶಾಲೆ ಆರಂಭಕ್ಕೆ ಸೂಚಿಸಲಾಗಿದೆ. ಜಿಲ್ಲಾಡಳಿತಗಳ ಬಳಿ 894 ಕೋಟಿ ಹಣವನ್ನು ಸಿದ್ಧವಿಟ್ಟಿದ್ದೇವೆ, ಕುಡಿಯುವ ನೀರಿನ ಸಮಸ್ಯೆ ಆದ 24 ಗಂಟೆಯ ಒಳಗೆ ಟ್ಯಾಂಕರ್ ಮೂಲಕವಾದರೂ ಪೂರೈಸಿ ಸಮಸ್ಯೆ ಪರಿಹಾರಕ್ಕೆ ಸೂಚಿಸಿದ್ದೇವೆ ಎಂದು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿದ್ದೇವೆ. ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿ, ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ್ದೆವು. ಕೇಂದ್ರ ಸಚಿವರ ಸಮಯಾವಕಾಶ ಸಿಗದ ಕಾರಣ ಕಾರ್ಯದರ್ಶಿ ಭೇಟಿ ಮಾಡಿದ್ದೆವು. ಹಣಕಾಸು ಸಚಿವರು ಸಮಯ ಕೊಟ್ಟಿದ್ದಾರೆ, ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ರಾಜ್ಯದ ರೈತರ ಸ್ಥಿತಿಗತಿ ಕಷ್ಟವಿದೆ, ರಾಜ್ಯಕ್ಕೆ ಬರಬೇಕಾದ ಹಣ ಬೇಗ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೆವು, ಅವರು ಇನ್ನು ತೀರ್ಮಾನ ಮಾಡದ ಕಾರಣ ಭಾಗಶಃ ಪರಿಹಾರವಾಗಿ 2 ಸಾವಿರ ರೂ.ಗಳ ಹಣವನ್ನು ಕೊಡಲು ಸಿಎಂ ತೀರ್ಮಾನಿಸಿದ್ದಾರೆ. ಡಿಬಿಟಿ ಮೂಲಕ ಮುಂದಿನ ವಾರ ಭಾಗಶಃ ಪರಿಹಾರದ ಮೊದಲ ಕಂತನ್ನು ಹಾಕಲಿದ್ದು, ಕೇಂದ್ರದಿಂದ ಪರಿಹಾರದ ಹಣ ಬರುತ್ತಿದ್ದಂತೆ ಬಾಕಿ ಪರಿಹಾರದ ಹಣ ಜಮೆ ಮಾಡಲಾಗುತ್ತದೆ. ಪರಿಹಾರದ ಹಣ ಕಡಿಮೆ ಎನ್ನುವುದು ನಿಜ. ವಿಮೆ ಮೂಲಕ ಪರಹಾರವೂ ಸಿಗಲಿದೆ, ಎಲ್ಲ ಸೇರಿ 4 ಸಾವಿರ ಕೋಟಿ ರೂಪಾಯಿ ಪರಿಹಾರ ಕೊಡುವ ಚಿಂತನೆ ಇದೆ ಎಂದರು.

ಬೆಳೆಹಾನಿ ಪರಿಹಾರದ ಮೊತ್ತ ಕಡಿಮೆ ಇದೆ, ಪರಿಷ್ಕರಿಸಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇದರ ಜೊತೆಗೆ ನಾವು ನಮ್ಮ ಸರ್ಕಾರದ ವತಿಯಿಂದ ರೈತರಿಗೆ ಉಂಟಾಗುವ ನಷ್ಟ ಕಡಿಮೆ ಮಾಡಲು ಎಲ್ಲ ರೀತಿಯ ಪ್ರಯತ್ನ ನಡೆಸಲಿದೆ. ಕೇಂದ್ರದ ಹಣ ಬಂದರೆ ರಾಜ್ಯ ಕೂಡ ತನ್ನ ಇತರ ಸಂಪನ್ಮೂಲ ಕ್ರೋಢೀಕರಿಸಿ ರೈತರಿಗೆ ನೆರವು ನೀಡಲು ಬದ್ಧವಿದೆ ಸಚಿವರು ತಿಳಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ