Breaking News

ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿಯ ಮೆಣಸಿನಕಾಯಿ ಬೆಳೆಗಳಿಗೆ 2.75 ಟಿಎಂಸಿ ನೀರು: ಡಿ.ಕೆ. ಶಿ

Spread the love

ಬೆಂಗಳೂರು: ಕೃಷ್ಣಾ ಮೇಲ್ದಂಡೆ (Upper Krishna Project) ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ (Alamatti and Narayanapura reservoirs) 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.

ಶಿವಕುಮಾರ್ (DCM DK Shivakumar) ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್, ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನದಲ್ಲಿ ನೀರು ತಲುಪಬಹುದು ಎಂದು ಹೇಳಿದರು.

ಶನಿವಾರ ರಾತ್ರಿ ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗದ ಜಿಲ್ಲಾ ಮಂತ್ರಿಗಳು, ಎಲ್ಲ ಪಕ್ಷದ ಶಾಸಕರು, ರೈತ ಮುಖಂಡರ ಜತೆ ಸಭೆ ಮಾಡಲಾಯಿತು. ಈ ಸಭೆಯಲ್ಲಿ ಜನಪ್ರತಿನಿಧಿಗಳು ವಾಸ್ತವ ಪರಿಸ್ಥಿತಿ ವಿವರಿಸಿ, ನೀರು ಬಿಡಲು ಒತ್ತಾಯಿಸಿದ್ದರು. ಹೀಗಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಮಾಹಿತಿ ನೀಡಿದರು.

ರೈತರ ರಕ್ಷಣೆ ಉದ್ದೇಶದಿಂದ ಬೆಳೆಗಳಿಗೆ ನೀರು

ರಾಜ್ಯದ ಇತಿಹಾಸದಲ್ಲೇ ಈ ಬಾರಿ ಅತ್ಯಂತ ದೊಡ್ಡ ಪ್ರಮಾಣದ ಬರಗಾಲ ಎದುರಾಗಿದೆ. ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಬರ ಪರಿಸ್ಥಿತಿಯಲ್ಲಿ ಬೆಳೆ ಹಾಕಬೇಡಿ ಎಂದು ಮನವಿ ಮಾಡಿದ್ದರೂ ಕೆಲವು ರೈತರು ಭತ್ತದ ಬದಲು ಮೆಣಸಿನಕಾಯಿ ಬೆಳೆ ಹಾಕಿಕೊಂಡಿದ್ದಾರೆ. ಈ ಬೆಳೆ ನಾಶವಾದರೆ 2 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗುವ ಸಾಧ್ಯತೆ ಇದೆ. ರೈತರ ರಕ್ಷಣೆ ಉದ್ದೇಶದಿಂದ ಬೆಳೆಗಳಿಗೆ ಅಂತಿಮ ಬಾರಿಗೆ 2.75 ಟಿಎಂಸಿ ನೀರು ಬಿಡಲು ಶನಿವಾರ ರಾತ್ರಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿಭಟನಾ ನಿರತ ರೈತರು, ಮನವಿ ಮಾಡಿರುವ ಶಾಸಕರುಗಳೇ ಮೆಣಸಿನಕಾಯಿ ಬೆಳೆಗಳಿಗೆ ಮಾತ್ರ ಈ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಜವಾಬ್ದಾರಿಯನ್ನು ಆ ಭಾಗದ ರೈತರಿಗೆ ವಹಿಸಿ ನೀರು ಬಿಡುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಈ ಹಿಂದೆ ಮಂಡ್ಯ ರೈತರ ರಕ್ಷಣೆ ಮಾಡಿದ್ದೆವು. ಈ ಮಧ್ಯೆ ಭದ್ರಾ ನೀರಿನ ವಿಚಾರದಲ್ಲಿ ಸಮಸ್ಯೆ ಎದುರಿಸಿದಾಗಲೂ ನಾವು ಸಮಸ್ಯೆ ನಿವಾರಣೆ ಮಾಡಿದ್ದೆವು. ಈಗ ಕೃಷ್ಣಾ ಮೇಲ್ದಂಡೆ ವ್ಯಾಪ್ತಿ ರೈತರ ರಕ್ಷಣೆ ಮಾಡಲಾಗುತ್ತಿದೆ. ಇದಾದ ನಂತರ ಕೃಷಿ ಉದ್ದೇಶಕ್ಕೆ ನೀರು ಬಿಡುವುದಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ಹಾಗೂ ಜನಪ್ರತಿನಿಧಿಗಳು ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ