Breaking News

ಯಾದಗಿರಿ ಪಿಎಸ್‌ಐ ಸಾವು; ಮೃತ ಪತ್ನಿಗೆ ಸರ್ಕಾರ ಉದ್ಯೋಗ, ಪರಿಹಾರ

Spread the love

ಬೆಂಗಳೂರು: ಯಾದಗಿರಿ ಪಿಎಸ್‌ಐ ಸಾವು ಪ್ರಕರಣದಲ್ಲಿ ಮೃತರ ಪತ್ನಿಗೆ ಸರ್ಕಾರದಿಂದ ಉದ್ಯೋಗ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಪಿಎಸ್‌ಐ ಸಾವು ಪ್ರಕರಣವನ್ನು ಈಗಾಗಲೇ ಸಿಒಡಿಗೆ ನೀಡಲಾಗಿದೆ. ಅವರು ತನಿಖೆ ಶುರು ಮಾಡಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ.

ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನಾನು ಬುಧವಾರ ಮೃತ ಪಿಎಸ್‌ಐ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಪತ್ನಿಗೆ ಕೆಲಸ ಕೊಡಲು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡುವ ಸಂಬಂಧ ಸಿಎಂ ಜತೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ಕುರಿತ ಪ್ರಶ್ನೆಗೆ, ಈಗಾಗಲೇ ಸಿಒಡಿ ತನಿಖೆಗೆ ಕೊಡಲಾಗಿದೆ. ತನಿಖೆ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಸಿಎಂ ಬಗ್ಗೆ ಅನಾವಶ್ಯಕ ಆಪಾದನೆಗಳನ್ನು ಮಾಡಿ ವಿರೋಧ ಪಕ್ಷದವರು ಪಾದಯಾತ್ರೆ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಕೊಡಬೇಕು ಎಂದು ಹೈಕಮಾಂಡ್ ಹೇಳಿದೆ. ಪ್ರತಿಯೊಬ್ಬ ಸಚಿವರು ಅದರ ಬಗ್ಗೆ ಮಾತಾಡಬೇಕು ಎಂದು ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಮಾಡುತ್ತಿದ್ದೇವೆ. ನಾವು ಕೂಡಾ ಅವರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ ಅಲ್ಲಿ ಹಿಂದಿನ ದಿನವೇ ಹೋಗಿ ಅನೇಕ ಪ್ರಶ್ನೆಗಳನ್ನು ಹಾಕುತ್ತಿದ್ದೇವೆ. ನಿಮ್ಮ ಕಾಲದಲ್ಲಿ ಏನಾಗಿತ್ತು ಎಂದು ಪ್ರಶ್ನೆ ಕೇಳುತ್ತಿದ್ದೇವೆ. ಮುಡಾ ಬಗ್ಗೆ ಏನು ಸತ್ಯಾಂಶ ಏನು ಎನ್ನುವುದರ ಬಗ್ಗೆಯೂ ನಾವು ಹೇಳುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ