Breaking News
Home / ಜಿಲ್ಲೆ / ಬೆಂಗಳೂರು / ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ

ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ

Spread the love

ಬೆಂಗಳೂರು, ಡಿ.11- ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನೇಮಕ,ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸರ್ವಾನುಮತ ದಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಅಧ್ಯಕ್ಷ ಸ್ಥಾನಕ್ಕೆ ಸಚಿವ ರಮೇಶ್ರ ಜಾಕಿಹೊಳಿ ಅವರ ಹೆಸರನ್ನು ಸೂಚಿಸಿದರು. ಶಾಸಕರಾದ ರಘು ಮೂರ್ತಿ, ಸೋಮಲಿಂಗಪ್ಪ, ನಾಗೇಂದ್ರ, ಗಣೇಶ್, ಬಸವನಗೌಡ ದದ್ದಲ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲï, ಗಂಗಾಧರ ನಾಯಕ್ ಮೊದಲಾದವರು ರಮೇಶ್ಅವರ ನೇಮಕವನ್ನು ಅನುಮೋದಿಸಿದರು.

ಈ ವೇಳೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಜನಾಂಗದ ಒಗ್ಗಟ್ಟಿನ ಸೂಚಕವಾಗಿ ಈ ಸಭೆ ನಡೆದಿದೆ. ಮೀಸಲಾತಿ ಹೆಚ್ಚಳಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಿ, ವಾಲ್ಮೀಕಿ ಜಾತ್ರೆ ವೇಳೆಗೆ ಸಮುದಾಯಕ್ಕೆ ಸಿಹಿ ಸುದ್ದಿ ಕೊಡುವುದಾಗಿ ತಿಳಿಸಿದರು.

ಜಾತ್ರೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕೋವಿಡ್ ಮಾರ್ಗಸೂಚಿ ಅನ್ವಯವೇ ವ್ಯವಸ್ಥೆಗಳನ್ನು ಮಾಡಬೇಕು. 3ನೇ ವರ್ಷದ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಮೇಶ್ ಜಾರಕಿಹೊಳಿ ಸಭೆಯಲ್ಲಿ ತಿಳಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ