Breaking News

ಡಿಸೆಂಬರ್‌ 26 ಮತ್ತು 27ರಂದು ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸಭೆ

Spread the love

ಬೆಳಗಾವಿಯಲ್ಲಿನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ
ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಿರ್ಣಯ ಕೈಗೊಳ್ಳಲಾಯಿತು.

ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ ನೀಡಲಾಯಿತು.
ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಬೇಕು.ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.
* ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.
ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ. ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.

ಡಿಸೆಂಬರ್ 26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.
ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಯಿತು.


Spread the love

About Laxminews 24x7

Check Also

ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದ ಪಿಎಸ್‌ಐ ಗಂಗಾ ಬಿರಾದರ

Spread the loveಪಿಎಸ್‌ಐ ಗಂಗಾ ಬಿರಾದರ ಗ್ರಾಮ ವಾಸ್ತವ್ಯ; ಲೆಡಿ ಸಿಂಗಮ್ ಕಾರ್ಯಕ್ಕೆ ಮೆಚ್ಚುಗೆ.! ಸಾರ್ವಜನಿಕರಿಗೆ ಕಾನೂನು ಅರಿವು..!! ಕಾಗವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ